Home » ಲೈವ್ ನ್ಯೂಸ್ » ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

ಕೊಪ್ಪಳ.08.ಜುಲೈ.25: ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಅಧ್ಯಯನ ಶಿಬಿರವನ್ನು ನಡೆಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.


ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಕರ್ನಾಟಕ ಸಾಹಿತ್ಯ ಅಕಾಡೆಮಿಯು ಉದ್ದೇಶಿಸಿದ್ದು, ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್  https://sahithyaacademy.karnataka.gov.in ಯಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Author

ಪ್ರಮುಖ ಸುದ್ದಿ

Stock market

Astrology