Home » ಲೈವ್ ನ್ಯೂಸ್ » ರಾಷ್ಟ್ರೀಯ ಲೋಕ ಆದಾಲತ್: ಜಿಲ್ಲೆಯಲ್ಲಿ 81,508 ಪ್ರಕರಣಗಳು ಇತ್ಯರ್ಥ-ನ್ಯಾ.ಪ್ರಕಾಶ ಬನಸೊಡೆ

ರಾಷ್ಟ್ರೀಯ ಲೋಕ ಆದಾಲತ್: ಜಿಲ್ಲೆಯಲ್ಲಿ 81,508 ಪ್ರಕರಣಗಳು ಇತ್ಯರ್ಥ-ನ್ಯಾ.ಪ್ರಕಾಶ ಬನಸೊಡೆ

ಬೀದರ.16.ಜುಲೈ.25:- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಇವರು ರಾಷ್ಟ್ರೀಯ ಅದಾಲತನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಜುಲೈ.12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ  ಜಿಲ್ಲೆಯಾದ್ಯಾಂತ ಒಟ್ಟು 81,508 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಒಟ್ಟು ಮೊತ್ತ 26,15,36,335 ರೂಪಾಯಿಗಳ ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈ ಬಾರಿಯ ಲೋಕ ಅದಾಲತನಲ್ಲಿ ಒಟ್ಟು 10,697 (ಪೆಂಡಿಂಗನಲ್ಲಿನ) ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು 11,05,50,484 ರೂ. ಹಣವನ್ನು ಕಕ್ಷಿದಾರರಿಗೆ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಾದ್ಯಾಂತ ಒಟ್ಟು 70,811 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು ಹಾಗೂ ಕಕ್ಷಿದಾರರಿಗೆ 15,09,85,851 ರೂ. ಹಣವನ್ನು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದರು.

ಜಿಲ್ಲೆಯಾಧ್ಯಾಂತ ಈ ಲೋಕ ಆದಾಲತನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ ಸಂದಾನದ ಮೂಲಕ 03 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಂದು ಮಾಡಲಾಗಿದೆ ಹಾಗೂ ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 7 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology