Home » ಲೈವ್ ನ್ಯೂಸ್ » ಸರ್ಕಾರಿ ದೃಶ್ಯಕಲಾ ಕಾಲೇಜು: ಎಂವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ದೃಶ್ಯಕಲಾ ಕಾಲೇಜು: ಎಂವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಪ್ಪಳ.31.ಜುಲೈ.25: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಥಮ ಬಿ.ವಿ.ಎ. ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ `ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್’ (ಎಂ.ವಿ.ಎ) (ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ದತಿ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಎಂ.ವಿ.ಎ. ಸ್ನಾತಕೋತ್ತರ ಪದವಿಯಲ್ಲಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಳಲ್ಲಿ ವಿಶೇಷ ಆಧ್ಯಯನದ ಸ್ನಾತಕೋತ್ತರ ಪದವಿಯಾಗಿರುತ್ತದೆ. ಪ್ರಥಮ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ (ಎಂ.ವಿ.ಎ), ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 7 ಅಂತಿಮ ದಿನಾಂಕವಾಗಿದ್ದು, ಆ. 11ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವ್ಯಯಕ್ತಿಕ ಸಂದರ್ಶನ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಸರ್ಕಾರದ ಅಂತರ್ಜಾಲ ವಿಳಾಸ http://www.mysore.nic.in ಮತ್ತು http://www.cavamysore.karnataka.gov.in ರ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಡೀನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology