Home » ಲೈವ್ ನ್ಯೂಸ್ » ಕಾರಂಜಾ ಜಲಾಶಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ, ಪರಿಶೀಲನೆ

ಕಾರಂಜಾ ಜಲಾಶಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ, ಪರಿಶೀಲನೆ

ಬೀದರ.30.ಅಗಸ್ಟ್.25:- ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಕಾರಂಜಾ ಜಲಾಶಯ ಸುತ್ತಮುತ್ತಲಿನ ಕಣಜಿ ಸೇರಿದಂತೆ ಅತಿವೃಷ್ಟಿ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಹಾನಿಗೊಳಗಾದ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿದರು.

ಭಾರಿ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಹಾಗೂ ಸೋಯಾಬೀನ್ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಹಲವೆಡೆ ಮನೆಗಳು ಕುಸಿತಗೊಂಡಿರುವುದರಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲೇ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ ಜಿಲ್ಲೆಯ ಜೀವನಾಡಿಯಾದ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು, ಜಲಾಶಯದ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರಸ್ತುತ 7 ಟಿಎಂಸಿ ಸಾಮಥ್ರ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 10 ಸಾವಿರ ಕ್ಯೂಸೆಕ್ ನೀರು ಒಳಹರಿವು ಆಗುತ್ತಿದ್ದು 13 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಚಿವರು ಅಧಿಕಾರಿಗಳಿಗೆ ನಿಬಂಧನೆಗಳಿಗೆ ಅನುಗುಣವಾಗಿ ಜಲಾಶಯದ ಸ್ಥಿತಿಗತಿ ಕಾಪಾಡಿಕೊಂಡು, ಜನರ ಜೀವ ಮತ್ತು ಆಸ್ತಿಗೆ ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

Author

ಪ್ರಮುಖ ಸುದ್ದಿ

Stock market

Astrology