Home » ಲೈವ್ ನ್ಯೂಸ್ » ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಹಾನಿ ಆಗಿರುವ ಪ್ರದೇಶಗಳಿಗೆ ಭೇಟಿ.

ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಹಾನಿ ಆಗಿರುವ ಪ್ರದೇಶಗಳಿಗೆ ಭೇಟಿ.

ಬೀದರ.31.ಆಗಸ್ಟ್.25:- ಬೀದರ ಜಿಲ್ಲೆಯಲ್ಲಿ ಅತಿ ಜಾಸ್ತಿ  ಎರಡು–ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮನೆಗಳು ಕುಸಿದು, ಹೆಸರು, ಉದ್ದು, ತೊಗರಿ, ಸೋಯಾಬೀನ್ ಸೇರಿದಂತೆ ಖರೀಫ್ ಬೆಳೆಗಳು ಹಾನಿಗೊಳಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ಹಿನ್ನೆಲೆಯಲ್ಲಿ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಭಾಲ್ಕಿ ತಾಲೂಕಿನ ಮೇಥಿ, ಮೇಳಕುಂದಾ, ವಾಡಿ ಹಾಗೂ ಭಾಟಸಾಂಗವಿ ಗ್ರಾಮಗಳಿಗೆ ಭೇಟಿ ನೀಡಿ ಮನೆ ಕುಸಿತ ಮತ್ತು ಬೆಳೆ ಹಾನಿ ಪ್ರದೇಶಗಳನ್ನು ಪರಿಶೀಲಿಸಿದರು.

ಸಂಸದರು ಸ್ಥಳೀಯರ ದುಃಖ–ಕಷ್ಟಗಳನ್ನು ಆಲಿಸಿ, ಸರ್ಕಾರದ ಮೂಲಕ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಕ್ರಮ ಜರುಗಿಸುವ ಭರವಸೆ ನೀಡಿದರು.

Author

ಪ್ರಮುಖ ಸುದ್ದಿ

Stock market

Astrology