Home » ಲೈವ್ ನ್ಯೂಸ್ » ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ, ಮನೆಮಾಲೀಕರು ಮತ್ತು ರೈತರು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ, ಮನೆಮಾಲೀಕರು ಮತ್ತು ರೈತರು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ.

ಬೀದರ್.31.ಆಗಸ್ಟ್.25:- ಬೀದರ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ, ಮನೆಮಾಲೀಕರು ಮತ್ತು ರೈತರು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಸದರಾದ ಶ್ರೀ ಸಾಗರ ಖಂಡ್ರೆ ಇಂದು ಕಾಸರ ತೂಗಾವ್, ಶಿವಣಿ, ಲಖನಗಾವ್, ಸೋಮಪುರ, ತಳವಾಡ(ಎಂ) ಹಾಗೂ ತೆಲಗಾವ್ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ರೈತರು ಬೆಳೆದ ಖರೀಫ್ ಬೆಳೆಗಳು ಸಂಪೂರ್ಣವಾಗಿ ನಷ್ಟಗೊಂಡಿರುವದನ್ನು ಗಮನಿಸಿದರು.

ಗ್ರಾಮಸ್ಥರ ಅಳಲುಗಳನ್ನು ಆಲಿಸಿದ ಸಂಸದರು, ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಶೀಘ್ರ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

Author

ಪ್ರಮುಖ ಸುದ್ದಿ

Stock market

Astrology