Home » ಲೈವ್ ನ್ಯೂಸ್ » ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮೀಕ್ಷಾ.

ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ವಿಡಿಯೋ ಕಾನ್ಫರೆನ್ಸ್  ಮೂಲಕ ಸಮೀಕ್ಷಾ.

ಬೀದರ.08.ಸೆಪ್ಟೆಂಬರ್.25: ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿ ಸಮಸ್ಯೆ ಸಮೀಕ್ಷಾ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಲಾಗಿದೆ.

2025ರ ಮುಂಗಾರು ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಲಾದ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಯಿತು.

ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದರು.

ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಭಾಗವಹಿಸಿ, ಜಿಲ್ಲೆಯ ಪ್ರವಾಹ ಪರಿಸ್ಥಿತಿ, ಹಾನಿಗೊಳಗಾದ ಗ್ರಾಮಗಳು, ಮೂಲಸೌಕರ್ಯ ಹಾನಿ ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗೆ ವಿವರಿಸಿದರು.

ತುರ್ತು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವು ಒದಗಿಸಲು ಹಾಗೂ ಹಾನಿಗೊಳಗಾದ ಕುಟುಂಬಗಳ ಪುನರ್ವಸತಿ ಕಾರ್ಯಗಳನ್ನು ತ್ವರಿತಗೊಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಚಿವರು ಮನವಿ ಮಾಡಿದರು.

Author

ಪ್ರಮುಖ ಸುದ್ದಿ

Stock market

Astrology