Home » ಲೈವ್ ನ್ಯೂಸ್ » ಬೀದರ್‌ನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣ ನಿರ್ಮಾಣ ಶೀಘ್ರದಲ್ಲೇ

ಬೀದರ್‌ನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣ ನಿರ್ಮಾಣ ಶೀಘ್ರದಲ್ಲೇ

ಬೀದರ.15.ಅಕ್ಟೋಬರ.25:- ನಗರದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣ ನಿರ್ಮಾಣದ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ನಗರದ ಹೊರವಲಯದ ಅತಿವಾಳ್ ಕ್ರಾಸ್ ಹಾಗೂ ರೇಷ್ಮೆ ಇಲಾಖೆ ಆವರಣ ಪ್ರದೇಶದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, “ಬೀದರ ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಹಾಗೂ ಅತ್ಯಾಧುನಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಶೀಘ್ರದಲ್ಲೇ ಸೂಕ್ತ ಸ್ಥಳವನ್ನು ಅಂತಿಮಗೊಳಿಸಿ ಅಗತ್ಯ ಅನುದಾನ ಒದಗಿಸಲಾಗುವುದು. ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತದೆ,” ಎಂದು ತಿಳಿಸಿದರು.

ಬೀದರ ಜಿಲ್ಲೆಯ ಯುವ ಪ್ರತಿಭೆಗಳ ಕ್ರೀಡಾ ಹಾದಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology