Home » ಲೈವ್ ನ್ಯೂಸ್ » ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಅಹ್ವಾನ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಅಹ್ವಾನ

ಬೀದರ.11.ನವೆಂಬರ್.25: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಬೀದರ ವತಿಯಿಂದ 2025-26ನೇ ಸಾಲಿನಲ್ಲಿ ಅರಿವು ಸಾಲದ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಸಾಲದ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಪ್ಯಾಸೆಂಜರ ಆಟೋರಿಕ್ಷಾ/ಗೂಡ್ಸ್ ವಾಹನ, ಟ್ಯಾಕ್ಸಿ ವಾಹನ ಕರೀದಿಸಲು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ವ್ಯಾಪಾರ/ಉದ್ದಿಮೆ ನೇರ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮತೀಯ ಅಲ್ಪಸಂಖ್ಯಾತರ ಅಂದರೆ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಜಿದಾರರು ಕಡ್ಡಾಯವಾಗಿ ರಾಷ್ಟಿçÃಕೃತ ಬ್ಯಾಂಕ ಖಾತೆಯನ್ನು ಪಡೆದು ಅರ್ಜಿಯಲ್ಲಿ ನಮೂದಿಸಬೇಕಾಗಿರುತ್ತದೆ ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳಾಗಿರಬೇಕು. ಸಾಲದ ಎಲ್ಲಾ ಯೋಜನೆಗಳಿಗೆ ಆನಲೈನ್ ಮುಖಾಂತರ ಅರ್ಜಿಯನ್ನು ದಿನಾಂಕ: 30-11-2025 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (ನಿ),ಮೌಲಾನಾ ಆಜಾದ ಭವನ, 1ನೇ ಮಹಡಿ, ಗುರುನಾನಕ ಝಿರಾ ದಿಂದ ಚಿಕಪೇಟ್ ರಿಂಗ ರಸ್ತೆ, ಬೀದರಗೆ ಅಥವಾ ದೂರವಾಣಿ ಸಂಖ್ಯೆ: 08482-467330ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology