Home » ಲೈವ್ ನ್ಯೂಸ್ » ಏಪ್ರಿಲ್‌ 23 ಮತ್ತು 24ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ.

ಏಪ್ರಿಲ್‌ 23 ಮತ್ತು 24ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ.

ಬೆಂಗಳೂರು.07.ಜನವರಿ.26: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್‌ 23 ಮತ್ತು 24ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನಡೆಸಲಿದ್ದು, ಜನವರಿ 17ರಿಂದ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಅವರು ಶುಕ್ರವಾರ, ಸಿಇಟಿ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 2026ರಲ್ಲಿ ನಡೆಸಲಿರುವ ಎಲ್ಲ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದರು.

ಈ ಬಾರಿಯೂ ಒಟಿಪಿ ಆಧಾರಿತ ಅರ್ಜಿ ಸಲ್ಲಿಕೆ ವ್ಯವಸ್ಥೆ ಇರಲಿದೆ. ನೋಂದಣಿ ಮತ್ತು ಲಾಗಿನ್‌ ನಂತರ ಅಭ್ಯರ್ಥಿಗಳು ಅರ್ಜಿ ವಿವರಗಳ ಜತೆಗೆ ಒಟಿಪಿ ಸಲ್ಲಿಸುವುದು ಕಡ್ಡಾಯ. ಇಲ್ಲವೆ, ಅಭ್ಯರ್ಥಿಯೇ ನೈಜ ಸಮಯದಲ್ಲಿ ತಮ್ಮ ಚಿತ್ರವನ್ನು ಸಲ್ಲಿಸಬೇಕಾಗುತ್ತದೆ. ಪರೀಕ್ಷಾ ಅಕ್ರಮಗಳನ್ನು ತಪ್ಪಿಸಲು ಈ ವ್ಯವಸ್ಥೆಯನ್ನು ಮುಂದುವರೆಸಲಾಗುತ್ತಿದೆ’ ಎಂದು ಕೆಇಎ ಮೂಲಗಳು ತಿಳಿಸಿವೆ.

Author

ಪ್ರಮುಖ ಸುದ್ದಿ

Stock market

Astrology