Home » ಲೈವ್ ನ್ಯೂಸ್ » ಎಲ್ಲಾ ಹುದ್ದೆ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ ಸಚಿವ ಸಂಪುಟ.

ಎಲ್ಲಾ ಹುದ್ದೆ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ ಸಚಿವ ಸಂಪುಟ.

ಬೆಂಗಳೂರು.22.ಜನವರಿ.26: ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ SC/ST C1 OBC GENERAL INCLUDING ALL CATEGORY S  ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವ ವಿಶ್ವಾಸ ಇದೆ.

ರಾಜ್ಯದ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಅನುಕೂಲ.

ರಾಜ್ಯದಲ್ಲಿ ಒಳಮಿಸಲಾತಿ ಮತ್ತಿತರ ಕಾರಣಗಳಿಂದ ಎರಡು ವರ್ಷಗಳಿಂದ ನೇಮಕಾತಿ ವಿಳಂಬವಾಗಿದೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ ನಡೆಸಿ ವಯೋಮಿತಿಯನ್ನು ಐದು ವರ್ಷ ಸಡಿಲಿಕೆ ಮಾಡುವಂತೆ ಒತ್ತಾಯಿಸಿದ್ದರು. ಸೆಪ್ಟೆಂಬರ್ 6ರಂದು ಎರಡು ವರ್ಷ ಒಳ ಮೀಸಲಾತಿ ಸಡಿಲಿಕೆ ಮಾಡಿ ಸರ್ಕಾರ ಆದೇಶಿಸಿದ್ದು, ಇದಕ್ಕೂ ವಿರೋಧ ಮುಂದುವರೆದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7 ರಂದು 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಎಸ್ಸಿ ಒಳ ಮೀಸಲಾತಿ ಪ್ರಕರಣ ನ್ಯಾಯಾಲಯದಲ್ಲಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇಕಡ 50ಕ್ಕೆ ಸೀಮಿತಗೊಳಿಸಬೇಕೆ ಅಥವಾ ಶೇಕಡ 56 ಕ್ಕೆ ಮೀಸಲಾತಿ ನೀಡಬಹುದೇ ಎಂಬುದು ಇನ್ನೂ ಇತ್ಯರ್ಥವಾಗಿಲ್ಲ. ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತಿದ್ದು, ಈ ಕಾರಣಕ್ಕಾಗಿ ಸಾವಿರಾರು ಮಂದಿ ವಯೋಮಿತಿ ಕಾರಣಕ್ಕಾಗಿ ಉದ್ಯೋಗ ಅರ್ಹತೆ ಕಳೆದುಕೊಳ್ಳುತ್ತಿದ್ದಾರೆ.

ಹೀಗಾಗಿ ಸಿವಿಲ್ ಸೇವೆಗಳಿಗೆ ನೇರ ನೇಮಕಾತಿ ಹಾಗೂ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಐದು ವರ್ಷ ಸಡಿಲಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಇದರಿಂದ ಉದ್ಯೋಗ ನಿರೀಕ್ಷೆಯಲ್ಲಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology