Home » ಲೈವ್ ನ್ಯೂಸ್ » ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪರ ಧ್ವನಿ ಎತ್ತಿದ ಶಾಸಕರು

ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪರ ಧ್ವನಿ ಎತ್ತಿದ ಶಾಸಕರು

ಅಂಗನವಾಡಿ ಸಿಬ್ಬಂದಿಯ ವೇತನ ಹೆಚ್ಚಿಸಿ: ಶಾಸಕ ಪ್ರಭು ಚವ್ಹಾಣ ಆಗ್ರಹ*

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನ ಹೆಚ್ಚಿಸುವಂತೆ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸರ್ಕಾರವನ್ನು ಆಗ್ರಹಿಸಿದರು.

ಬೆಂಗಳೂರು.19.ಮಾರ್ಚ್.26:ವಿಧಾನಸಭಾ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುರಿತ ಚರ್ಚೆಯ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಮಕ್ಕಳಿಗೆ ಬಿಸಿಯೂಟ ಪೂರೈಕೆ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ತಾಯಂದಿರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವುದು ಒಳಗೊಂಡು ಹಲವಾರು ವಿಧದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜವಾಬ್ದಾರಿಯ ಜೊತೆಗೆ ಸರ್ಕಾರಗಳು ಅನ್ಯ ಕೆಲಸಗಳನ್ನು ವಹಿಸುತ್ತವೆ. ಸಂಕಷ್ಟಗಳ ನಡುವೆಯೂ ಎಲ್ಲ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.

ಇವರು ವೇತನ ಹೆಚ್ಚಿಸುವಂತೆ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯೇ ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದರಂತೆ ಎಲ್ಲ ಶಾಸಕರನ್ನು ಭೇಟಿಯಾಗುತ್ತಿದ್ದಾರೆ.

ಇವರಿಗೆ ಪ್ರಸ್ತುತ ಕೊಡುತ್ತಿರುವ ವೇತನ ಬಹಳಷ್ಟು ಕಡಿಮೆಯಿದ್ದು, ಬೆಲೆಗಳ ಏರಿಕೆಯ ಸಂದರ್ಭದಲ್ಲಿ ಈಗಿರುವ ವೇತನ ಯಾವುದಕ್ಕೂ ಸಾಲುವುದಿಲ್ಲ. ಹಾಗಾಗಿ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ವೇತನ ಹೆಚ್ಚಳ ಪ್ರಮುಖ ಬೇಡಿಕೆಯಾಗಿದ್ದು, ಸರ್ಕಾರ ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ವೇತನ ಹೆಚ್ಚಿಸಿ, ಅಗತ್ಯ ಸೌಕರ್ಯಗಳನ್ನು ಒದಗಿಸಬೇಕೆಂದು ತಿಳಿಸಿದರು. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು.

Author

ಪ್ರಮುಖ ಸುದ್ದಿ

Stock market

Astrology