Home » ಲೈವ್ ನ್ಯೂಸ್ » ಕೊಪ್ಪಳ: ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯ ಆಹಾರ ಧಾನ್ಯ ಒಟ್ಟಿಗೆ ವಿತರಣೆ

ಕೊಪ್ಪಳ: ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯ ಆಹಾರ ಧಾನ್ಯ ಒಟ್ಟಿಗೆ ವಿತರಣೆ

ಕೊಪ್ಪಳ.20.ಆಗಸ್ಟ್.26: ಕೊಪ್ಪಳ ತಾಲ್ಲೂಕಿನಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್-2026ರ ಎರಡು ತಿಂಗಳ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ಒಟ್ಟಿಗೆ ವಿತರಿಸಲಾಗುತ್ತಿದೆ ಎಂದು ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ.


ಕೇಂದ್ರ ಸರ್ಕಾರವು ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್-2026ರ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಆಗಸ್ಟ್ ಮಾಹೆಯಲ್ಲಿ ಹಂಚಿಕೆ ನೀಡಿ ವಿತರಣೆ ಮಾಡಲು ಸೂಚಿಸಿದ್ದು, ಅದರಂತೆ ಕ್ರಮವಹಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಎರಡೂ ತಿಂಗಳುಗಳ ಹಂಚಿಕೆಯನ್ನು ಆಗಸ್ಟ್ ಮಾಹೆಯಲ್ಲಿಯೇ ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ವಿತರಿಸಲಾಗುತ್ತಿದೆ. ಹೀಗೆ ವಿತರಿಸುವಾಗ ಆಗಸ್ಟ್ ಮತ್ತು ಸೆಪ್ಟೆಂಬರ್-2026ರ ಮಾಹೆಗಳಿಗೆ ಸಂಬಂಧಿಸಿದಂತೆ ಕಾರ್ಡುದಾರರಿಂದ ಎರಡೂ ಸಲ ಬಯೋಮೆಟ್ರಿಕ್ ಪಡೆಯಲಾಗುತ್ತಿದೆ.


ಆಗಸ್ಟ್-2026ರ ಮಾಹೆಯಲ್ಲಿ ಕಾರ್ಡುದಾರರಿಗೆ ವಿತರಿಸುವ ಪ್ರಮಾಣ: ಅಂತ್ಯೋದಯ ಅನ್ನ ಯೋಜನೆ (ಎಎವೈ) ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಪ್ರತಿ ಪಡಿತರ ಚೀಟಿಗೆ 28 ಕೆ.ಜಿ. ಅಕ್ಕಿ ಹಾಗೂ 42 ಕೆ.ಜಿ. ಜೋಳ ಸೇರಿದಂತೆ ಒಟ್ಟು 70 ಕೆ.ಜಿ. ಆಹಾರ ಧಾನ್ಯ. ಕೇಂದ್ರ ಪಡಿತರ ಚೀಟಿ ಸದಸ್ಯರಿಗೆ ಸಂಬಂಧಿಸಿದಂತೆ ಪ್ರತಿ ಸದಸ್ಯರಿಗೆ 4 ಕೆ.ಜಿ. ಅಕ್ಕಿ ಹಾಗೂ 6 ಕೆ.ಜಿ. ಜೋಳ ಸೇರಿದಂತೆ ಒಟ್ಟು 10 ಕೆ.ಜಿ. ಆಹಾರ ಧಾನ್ಯ. ರಾಜ್ಯ ಪಡಿತರ ಚೀಟಿ ಸದಸ್ಯರಿಗೆ ಸಂಬಂಧಿಸಿದಂತೆ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ.


ಕೊಪ್ಪಳ ತಾಲ್ಲೂಕಿನ ಅರ್ಹ ಕಾರ್ಡುದಾರರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ನಿಗದಿತ ಪ್ರಮಾಣದ ಆಹಾರ ಧಾನ್ಯವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Author

ಪ್ರಮುಖ ಸುದ್ದಿ

Stock market

Astrology