Home » ಲೈವ್ ನ್ಯೂಸ್ » ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ.

ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದ ಬಳಿ ಇದ್ದು, 94 ಕಿಲೋಮೀಟರ್ ಆಳದಲ್ಲಿದೆ. ಬೆಳಿಗ್ಗೆ 11:47 ಕ್ಕೆ ಭೂಕಂಪ ದಾಖಲಾಗಿದೆ.

ಇಸ್ಲಾಮಾಬಾದ್, ಲಾಹೋರ್, ಪೇಶಾವರ್, ರಾವಲ್ಪಿಂಡಿ ಮತ್ತು ಖೈಬರ್ ಪಖ್ತುಂಖ್ವಾದ ವಿವಿಧ ಭಾಗಗಳು ಸೇರಿದಂತೆ ಪಾಕಿಸ್ತಾನದ ವ್ಯಾಪಕ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ.

Author

ಪ್ರಮುಖ ಸುದ್ದಿ

Stock market

Astrology