Home » ಲೈವ್ ನ್ಯೂಸ್ » ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆ ಪರಿಶೀಲನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಭದ್ರತಾ ಪರಿಸ್ಥಿತಿ ಮತ್ತು ಕಾರ್ಯಾಚರಣೆಯ ಸಿದ್ಧತೆ ಪರಿಶೀಲನೆ

ಹೊಸ ದೆಹಲಿ.09.ಮೇ.25:-ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಪಶ್ಚಿಮ ಗಡಿಯಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಅಮರ್‌ಪ್ರೀತ್ ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಭಾಗವಹಿಸಿದ್ದರು. ರಕ್ಷಣಾ ಕಾರ್ಯದರ್ಶಿ ಆರ್‌ಕೆ ಸಿಂಗ್ ಕೂಡ ಸಭೆಯಲ್ಲಿ ಹಾಜರಿದ್ದರು.

ಈ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಗಡಿ ಭದ್ರತಾ ಪಡೆ, ಸಿಐಎಸ್‌ಎಫ್ ಮತ್ತು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ಮಹಾನಿರ್ದೇಶಕರೊಂದಿಗೆ ಸಭೆ ನಡೆಸಿದರು.

Author

ಪ್ರಮುಖ ಸುದ್ದಿ

Stock market

Astrology