Home » ಲೈವ್ ನ್ಯೂಸ್ » ರಾಜ್ಯದ ಶಾಲೆಗಳಲ್ಲಿ ಈ 2024-25ನೇ ಶೈಕ್ಷಣಿಕ ವರ್ಷದಿಂದಲೇ ನೈತಿಕ ಶಿಕ್ಷಣ ಭೋಧನೆ.ಸಚಿವ ಮಧು ಬಂಗಾರಪ್ಪ

ರಾಜ್ಯದ ಶಾಲೆಗಳಲ್ಲಿ ಈ 2024-25ನೇ ಶೈಕ್ಷಣಿಕ ವರ್ಷದಿಂದಲೇ ನೈತಿಕ ಶಿಕ್ಷಣ ಭೋಧನೆ.ಸಚಿವ ಮಧು ಬಂಗಾರಪ್ಪ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನೈತಿಕ ಶಿಕ್ಷಣ ಬೋಧನೆ  2024-25ನೇ ಸಾಲಿನಿಂದಲೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗುವುದು  ನೈತಿಕ ಶಿಕ್ಷಣ ಬೋಧನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು.

ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲವೊಂದು ಶಾಲೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅವುಗಳು ಮುಂದೆ ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ.

ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು, ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

Author

ಪ್ರಮುಖ ಸುದ್ದಿ

Stock market

Astrology