ಕೊಪ್ಪಳ: ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯ ಆಹಾರ ಧಾನ್ಯ ಒಟ್ಟಿಗೆ ವಿತರಣೆ
ಕೊಪ್ಪಳ.20.ಆಗಸ್ಟ್.26: ಕೊಪ್ಪಳ ತಾಲ್ಲೂಕಿನಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್-2026ರ ಎರಡು ತಿಂಗಳ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ಒಟ್ಟಿಗೆ ವಿತರಿಸಲಾಗುತ್ತಿದೆ ಎಂದು ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್-2026ರ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಆಗಸ್ಟ್ ಮಾಹೆಯಲ್ಲಿ ಹಂಚಿಕೆ ನೀಡಿ ವಿತರಣೆ ಮಾಡಲು ಸೂಚಿಸಿದ್ದು, ಅದರಂತೆ ಕ್ರಮವಹಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಎರಡೂ ತಿಂಗಳುಗಳ ಹಂಚಿಕೆಯನ್ನು ಆಗಸ್ಟ್ ಮಾಹೆಯಲ್ಲಿಯೇ ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ವಿತರಿಸಲಾಗುತ್ತಿದೆ….
Any questions related to prajaprabhat?