Home » ಲೈವ್ ನ್ಯೂಸ್ » SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್.

SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್.

ರಾಜ್ಯದಲ್ಲಿ SSLC ಮತ್ತು PUC ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ನಿಯಮ ಜಾರಿ. ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ಬಳಿಕ ನಿರ್ಧಾರ ಮಾಡುತ್ತೇವೆ. ಎಲ್ಲ ವಿಷಯಗಳಿಗೆ ನಿಗದಿ ಮಾಡಿರುವ ಉತ್ತೀರ್ಣ ಅಂಕ 35 ಅನ್ನು 33ಕ್ಕೆ ಇಳಿಸುವ ಬಗ್ಗೆ ಚರ್ಚಿಸಲು ಸಾರ್ವಜನಿಕ ವಲಯಕ್ಕೆ ಬಿಟ್ಟಿದ್ದೆವು. ಅದರಲ್ಲಿ ಸುಮಾರು 701 ಮಂದಿ 33 ಅಂಕಗಳ ಪರವಾಗಿಯೂ ಹಾಗೂ 35ರ ಪರವಾಗಿ ಕೇವಲ 8 ಅಭಿಪ್ರಾಯಗಳು ಬಂದವು. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದ ನಮ್ಮ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ನಾಳೆ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು 600 ಅಂಕಗಳಿಗೆ 198 ಅಂಕಗಳನ್ನು ಗಳಿಸಬೇಕು 1. ಹೊಸ ನಿಯಮದ ಪ್ರಕಾರ, ಲಿಖಿತ ಮತ್ತು ಆಂತರಿಕ ಅಂಕಗಳನ್ನು ಸೇರಿಸಿ ಕನಿಷ್ಠ 30 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ 1. 2025-26ನೇ ಸಾಲಿನಿಂದ, ಉತ್ತೀರ್ಣ ಅಂಕವನ್ನು ಶೇಕಡಾ 33ಕ್ಕೆ ನಿಗದಿಪಡಿಸಲಾಗಿದೆ

ಪರೀಕ್ಷಾ ಸುಧಾರಣೆ ಮತ್ತು ವೆಬ್ ಕಾಸ್ಟಿಂಗ್ ಯಶಸ್ಸು:

ಪರೀಕ್ಷಾ ಅವ್ಯವಸ್ಥೆಯನ್ನು ಸುಧಾರಣೆ ತರುವುದು ಮುಖ್ಯವಾಗಿತ್ತು. ಮಕ್ಕಳು ಬೇರೆ ವ್ಯವಸ್ಥೆಯಲ್ಲಿ ಪಾಸ್ ಆದ್ರೆ ಮುಂದೆ ತೊಂದರೆಯಾಗುತ್ತೆ. ಹೀಗಾಗಿ ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಲಾಯಿತು. ಮೂರು ಬೋರ್ಡ್ ಪರೀಕ್ಷೆಗಳು ಉತ್ತಮ ಪರಿಣಾಮ ಬೀರಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಸಿಎಂ ನೀಡಿದ ಶೇ. 75ರಷ್ಟು ಗುರಿಯ ಬದಲಿಗೆ ಈ ವರ್ಷ ಶೇ. 79ರಷ್ಟು ತೇರ್ಗಡೆ ಪ್ರಮಾಣ ರೀಚ್ ಆಗಲು ಸಾಧ್ಯವಾಯಿತು. ವೆಬ್ ಕಾಸ್ಟಿಂಗ್‌ನಿಂದ ಪರೀಕ್ಷೆಗಳು ಕಟ್ಟುನಿಟ್ಟು ಆಗಿದ್ದು, ಯಾವುದೇ ಲೋಪದೋಷಗಳಿಲ್ಲದೆ ನಡೆದಿದೆ ಎಂದು ಸಚಿವರು ತಿಳಿಸಿದರು.

ಆದರೆ, ಪ್ರಥಮ ಭಾಷೆಯ ಗರಿಷ್ಠ ಅಂಕವನ್ನು 125 ರಿಂದ 100 ಕ್ಕೆ ಇಳಿಸುವ ವಿಚಾರ ಇನ್ನೂ ಅಂತಿಮ ಆಗಿಲ್ಲ. ಈ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತೇವೆ ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಹಾಗೂ ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology