Home » ಲೈವ್ ನ್ಯೂಸ್ » 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ವಿಶ್ವವಿದ್ಯಾಲಯ ಅನುಮೋದನೆ.

22 ಖಾಸಗಿ ಕಾಲೇಜುಗಳನ್ನು ಮುಚ್ಚಲು ವಿಶ್ವವಿದ್ಯಾಲಯ ಅನುಮೋದನೆ.

ಮಂಗಳೂರು.26.ಡಿಸೆಂಬರ್.25: ಮಂಗಳೂರು ವಿಶ್ವವಿದ್ಯಾಲಯ  ಸಂಯೋಜಿತ ಇರುವ ಖಾಸಗಿ ಪದವಿ ಕೋರ್ಸ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿ ದಕ್ಷಿಣ ಮಂಗಳೂರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಕಾರ್ಯನಿರ್ವಹಣೆ ಸ್ಥಗಿತಗೊಳಿಸಲಿವೆ. ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಪೂರ್ಣಗೊಳಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿದೆ.

ಮುಚ್ಚಲಿರುವ ಕಾಲೇಜುಗಳ ಪಟ್ಟಿ

ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು – ಸುರತ್ಕಲ್

ಅಂಜುಮನ್ ಪ್ರಥಮ ದರ್ಜೆ ಕಾಲೇಜು – ಮಂಗಳೂರು

ಅಮೃತ ಕಾಲೇಜು – ಪಡೀಲ್

ಸಿಲಿಕಾನ್ ಕಾಲೇಜ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ – ಕೊಂಚಾಡಿ

ಮೊಗ್ಲಿಂಗ್ ಇನ್ಸ್ಟಿಟ್ಯೂಟ್ ಆಫ್ ಜರ್ಮನ್ ಲ್ಯಾಂಗ್ವೇಜ್ – ಬಲ್ಮಠ

ಸಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು – ಮಂಗಳೂರು

ರೊಸಾರಿಯೊ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ – ಬೋಳಾರ

ಕರಾವಳಿ ಕಾಲೇಜ್ ಆಫ್ ಎಜುಕೇಶನ್

ಪ್ರೇಮಕಾಂತಿ ಕಾಲೇಜ್ ಆಫ್ ಎಜುಕೇಶನ್

ಸೇಪಿಯೆನ್ಶಿಯ ಬೆಥನಿ ಪ್ರಥಮ ದರ್ಜೆ ಕಾಲೇಜು – ನೆಲ್ಯಾಡಿ

ಶಾರದಾ ಮಹಿಳಾ ಕಾಲೇಜು – ಸುಳ್ಯ

ರಾಮಕುಂಜೇಶ್ವರ ಕಾಲೇಜು

ಹಝ್ರತ್ ಸಯ್ಯದ್ ಮದನಿ ಮಹಿಳಾ ಕಾಲೇಜು – ಉಳ್ಳಾಲ

ಸೇಂಟ್ ಸೆಬಾಸ್ಟಿಯನ್ ಕಾಲೇಜ್ ಆಫ್ ಕಾಮರ್ಸ್

ಸೇಂಟ್ ಥಾಮಸ್ ಕಾಲೇಜು – ಬೆಳ್ತಂಗಡಿ

ಮಾರ್ ಇವಾನಿಯೋಸ್ ಕಾಲೇಜು – ಕಡಬ

ಮಾಧವ ಪೈ ಕಾಲೇಜು – ಮಣಿಪಾಲ

ಮೂಕಾಂಬಿಕಾ ಪ್ರಥಮ ದರ್ಜೆ ಕಾಲೇಜು – ಬೈಂದೂರು

ವರಸಿದ್ಧಿ ವಿನಾಯಕ ಪ್ರಥಮ ದರ್ಜೆ ಕಾಲೇಜು – ಕುಂದಾಪುರ

ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್ – ಐರೋಡಿ, ಉಡುಪಿ

ವಿದ್ಯಾನಿಕೇತನ ಪ್ರಥಮ ದರ್ಜೆ ಕಾಲೇಜು – ಕಾಪು

ಕೃಷ್ಣಭಾಯಿ ವಾಸುದೇವ್ ಶೆಣೈ ಸ್ಮಾರಕ ಕಾಲೇಜು – ಕಟಪಾಡಿ

ಶೈಕ್ಷಣಿಕ ವ್ಯವಸ್ಥೆಗೆ ಮತ್ತೊಂದು ಹೊಡೆತ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ತೀವ್ರ ಕೊರತೆ ಉಂಟಾಗಿದ್ದು, ಬಹುತೇಕ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿಯೇ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವುದಾಗಿ ಇತ್ತೀಚೆಗೆ ವರದಿಯಾಗಿತ್ತು. ಹಳೆಯ ವಿಶ್ವವಿದ್ಯಾಲಯಗಳು ಅಧ್ಯಾಪಕರ ಕೊರತೆಯಿಂದ ಬಳಲುತ್ತಿದ್ದರೆ, ಹೊಸದಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯಗಳು ಪರ್ಯಾಪ್ತ ಬೋಧಕರು ಮತ್ತು ಸರ್ಕಾರಿ ಅನುದಾನವಿಲ್ಲದೆ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿವೆ.

ಇದರಿಂದ ಕಾಲೇಜುಗಳ ಶುಲ್ಕ ಹೆಚ್ಚಳವಾಗಿದ್ದು, ಅದರ ಪರಿಣಾಮವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತಷ್ಟು ಕಡಿಮೆಯಾಗುತ್ತಿದೆ ಎಂದು ತಿಳಿದುಬಂದಿದೆ.

Author

ಪ್ರಮುಖ ಸುದ್ದಿ

Stock market

Astrology